Skip to main content


ಸದ್ದು ಮಾಡಲು ಸಜ್ಜಾದ ಮುರಳಿಯ ಭರಾಟೆ

ಭರಾಟೆ ಚಿತ್ರದ ಫೋಟೋಗಳು ಮತ್ತು ಪೋಸ್ಟರ್​ನ್ನು​​​ ಚಿತ್ರತಂಡ ಬಿಡುಗಡೆ ಮಾಡಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಾಕಷ್ಟು ಸುದ್ದಿ ಮಾಡುತ್ತಿವೆ. ಅಂದಹಾಗೆ, ಈ ಚಿತ್ರದಲ್ಲಿ ಮುರಳಿಗೆ ನಾಯಕಿಯಾಗಿ ಶ್ರೀಲೀಲಾ ಕಾಣಿಸಿಕೊಳ್ಳುತ್ತಿದ್ದು, ಒಂಭತ್ತು ಜನಪ್ರಿಯ ಖಳನಟರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭರಾಟೆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.  ರಾಜಸ್ಥಾನದಲ್ಲಿ 21 ದಿನಗಳ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗವಹಿಸುವುದಕ್ಕೆ ಚಿತ್ರತಂಡ ಸದ್ಯದಲ್ಲೇ ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಲಿದೆ.ಭರಾಟೆ ಚಿತ್ರವನ್ನು ಬಹದ್ದೂರ್ ಚೇತನ್ ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ರಚಿಸಿದ್ದಾರೆ.  

short by Pawan / more at Eenadu India

Comments