Skip to main content


ಅಂಬಿ ಅಭಿಮಾನಿಗಳಿಗೆ ಇಲ್ಲೊಂದು ಕಹಿ ಸುದ್ದಿ ??

ಸ್ಯಾಂಡಲ್ ವುಡ್ ರೆಬೆಲ್ ಸ್ಟಾರ್ ಅಂಬರೀಶ್ ನಾಯಕ ನಟನಾಗಿ ತೆರೆಗೆ ಬರುತ್ತಿರುವ ವಿಭಿನ್ನ ಶೀರ್ಷಿಕೆಯ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.  ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದ್ದು, ಚಿತ್ರ ತೆರೆಗೆ ಬರಲು ಸಜ್ಜಾಗುತ್ತಿದೆ. ಮೂಲಗಳ ಪ್ರಕಾರ ಇದೇ ತಿಂಗಳು 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರ ...ರಿಲೀಸ್ ಆಗಬೇಕಿತ್ತು, ಆದರೆ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.  ಹೌದು, ರಾಜ್ಯದ ಇತರೆ ಕಡೆಗಳಲ್ಲಿ ಮಳೆ ಅಬ್ಬರ ಮತ್ತು ಪ್ರವಾಹ ಸ್ಥಿತಿ ನಿರ್ಮಾಣ ಆಗಿರುವ ಕಾರಣ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರವನ್ನ ಸದ್ಯಕ್ಕೆ ಬಿಡುಗಡೆ ಮಾಡದಿರಲು ಚಿತ್ರತಂಡ ತೀರ್ಮಾನ ಮಾಡಿದೆ.  ದಸರಾ ಹಬ್ಬದ ವೇಳೆಗೆ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ. ಇದೇ ಮೊದಲ ಬಾರಿಗೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪಾತ್ರವರ್ಗದಲ್ಲಿ ಸುದೀಪ್ ಮತ್ತು ಶ್ರುತಿ ಹರಿಹರನ್ ಸೇರಿದಂತೆ ಮುಂತಾದವರಿದ್ದಾರೆ.

short by Nithin / more at Kannada News Now

Comments