Skip to main content


ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ ಕಿರಿಕ್ ಬೆಡಗಿ!

ಜುಲೈ 19ರಂದು ರಶ್ಮಿಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಗೀತಾ ಗೋವಿಂದಂ ಚಿತ್ರದ ಪೋಸ್ಟರ್ ಪೋಸ್ಟ್ ಮಾಡಿದ್ದರು. ನಟ ವಿಜಯ್ ದೇವರಕೊಂಡ ರಶ್ಮಿಕಾರನ್ನು ತನ್ನ ಬೆನ್ನ ಮೇಲೆ ಎತ್ತಿಕೊಂಡಿರುವ ಪೋಸ್ಟರ್ ನೋಡಿ ಅಭಿಮಾನಿಗಳು ರಶ್ಮಿಕಾರನ್ನು ಟ್ರೋಲ್ ಮಾಡಲು ಶುರು ಮಾಡಿದರು. ಈ ಟ್ರೋಲ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ, “ನಾನು ರಕ್ಷಿತ್ ರನ್ನು ಪ್ರೀತಿಸುತ್ತೇನೆ. ನನ್ನ ವೈಯಕ್ತಿಕ ಜೀವನದ ಬಗ್ಗೆ ನೀವು ಕಮೆಂಟ್ ಮಾಡುವುದು ಸರಿಯಲ್ಲ. ನಾನು ಈ ರೀತಿ ಕೆಟ್ಟದಾಗಿ ಮಾತನಾಡುತ್ತಿರುವುದ್ದಕ್ಕೆ ಕ್ಷಮೆ ಕೇಳುತ್ತೇನೆ. ಏಕೆಂದರೆ ನಾವು ಸಿನಿಮಾ ಕಲಾವಿದರು. ನೀವು ಬೇಕಿದ್ದರೆ ನಮ್ಮ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿ ನಾನೇನು ಹೇಳುವುದಿಲ್ಲ. ಆದರೆ ನನ್ನ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಮಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ. 

short by Pawan / more at Public Tv

Comments