Skip to main content


ಪ್ರಜಾಕೀಯದತ್ತ ಹೆಜ್ಜೆ ಹಾಕಿದ ಪಾಕಿಸ್ತಾನಕ್ಕೆ ಉಪ್ಪಿ ಪ್ರಚಾರ: ಜನರಿಂದ ಟೀಕೆ

ಉಪ್ಪಿಯ ಪ್ರಜಾಕೀಯದ ಬಗ್ಗೆ ಚರ್ಚೆಯಾಗುತ್ತಿರುವಾಗಲೇ, ಪಾಕಿಸ್ತಾನದಲ್ಲಿ ಅದನ್ನ ಅಳವಡಿಸಿಕೊಂಡಿದ್ದಾರೆ ಎನ್ನುವುದಕ್ಕೆ ವಿಡಿಯೋವೊಂದು ಸಾಕ್ಷಿಯಾಗಿದೆ. ಪಾಕಿಸ್ತಾನದ ನೂತನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪಾಕಿಸ್ತಾನದ ಕುರಿತು ಮತ್ತು ಆ ದೇಶದ ಅಭಿವೃದ್ಧಿ ಕುರಿತು ಮಾತನಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಶೇರ್ ಮಾಡಿರುವ ರಿಯಲ್ ಸ್ಟಾರ್ ಉಪೇಂದ್ರ, ಪಾಕಿಸ್ತಾನ ಪ್ರಜಾಕೀಯದ ಕಡೆ ಹೆಜ್ಜೆ ಹಾಕಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಒಂದು ಕಡೆ ಮೆಚ್ಚುಗೆಗೆ ಪಾತ್ರವಾಗಿದ್ದರೇ, ಮತ್ತೊಂದೆಡೆ ಶತ್ರುರಾಷ್ಟ್ರದ ಪರವಾಗಿ ಪ್ರಚಾರ ಮಾಡುವುದು ಸರಿಯಿಲ್ಲ ಎಂದು ಟೀಕೆ ಮಾಡುತ್ತಿದ್ದಾರೆ.    

short by Pawan / more at Filmibeat

Comments