Skip to main content


ದಿ ವಿಲನ್ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

`ದಿ ವಿಲನ್’ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನವ ಚಕ್ರವರ್ತಿ ಸುದೀಪ್ ಒಟ್ಟಿಗೆ ಅಭಿನಯಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿದೆ. ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.     

short by Pawan / more at Public Tv

Comments