Skip to main content


ಯಶ್ ಜೊತೆಗೆ ಹೆಜ್ಜೆ ಹಾಕಲು ಓಡಿ ಬಂದ ತಮನ್ನಾ

ನಟಿ ತಮನ್ನಾ ಭಾಟಿಯಾ ಈಗ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಈ ಹಿಂದೆ ನಿಖಿಲ್ ಕುಮಾರ್ ಅಭಿಮಾನಯದ 'ಜಾಗ್ವಾರ್' ಸಿನಿಮಾದ ಮಸ್ತ್ ಹಾಡಿಗೆ ಮೈ ಚಳಿ ಬಿಟ್ಟು ಕುಣಿದಿದ್ದ ಈ ಕುವರಿ ಈಗ ಯಶ್ ಜೊತೆಗೆ ಹೆಜ್ಜೆ ಹಾಕಲು ಓಡಿ ಬಂದಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆ ಜಿ ಎಫ್' ಸಿನಿಮಾದ ವಿಶೇಷ ಹಾಡಿನಲ್ಲಿ ನಟಿ ತಮನ್ನಾ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಹಾಡಿಗಾಗಿ ಕಾಜಲ್ ಅಗರ್ವಾಲ್, ಲಕ್ಷ್ಮಿ ರೈ, ತಮನ್ನಾ ಹಾಗೂ ನೊರಾ ಫತೇಹಿ ಈ ನಾಲ್ಕು ನಟಿಯರ ಹೆಸರು ಕೇಳಿ ಬಂದಿತ್ತು. ಈ ಪೈಕಿ ಈಗ ತಮನ್ನಾ ಫೈನಲ್ ಆಗಿದ್ದಾರೆ. ಚಿತ್ರದಲ್ಲಿ ತಮನ್ನಾ ಕಾಣಿಸಿಕೊಳ್ಳುತ್ತಿರುವ ವಿಷಯವನ್ನು ಸ್ವತಃ ಚಿತ್ರದ ನಿರ್ಮಾಪಕ ಕಾರ್ತಿಕ್ ಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.    

short by Pawan / more at Filmibeat

Comments