Skip to main content


ಮಂಗಳೂರು ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಹೇಳಲಿದ್ದಾರೆ ರಶ್ಮಿಕಾ ಮಂದಣ್ಣ

ಕಿರಿಕ್‌ ಪಾರ್ಟಿ ಮೂಲಕ ಸೂಪರ್‌ ತಾರೆ ಪಟ್ಟಕ್ಕೇರಿದ ರಶ್ಮಿಕಾ ಮಂದಣ್ಣ ಇದೀಗ ಬಿಝಿ ನಟಿ. ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಬಿಡುವಿಲ್ಲದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿರುವ ರಶ್ಮಿಕಾ ಒಂದು ಸಾಮಾಜಿಕ ಹೊಣೆಗಾರಿಕೆಗಾಗಿ ಮಂಗಳೂರಿಗೆ ಹೋಗುತ್ತಿದ್ದಾರೆ.  ಕಿರಿಕ್‌ ಪಾರ್ಟಿ ಸಿನಿಮಾದಲ್ಲಿ ಕಾಲೇಜು ವಿದ್ಯಾರ್ಥಿನಿಯಾಗಿ ಕಾಣಿಸಿಕೊಂಡಿರುವ ರಶ್ಮಿಕಾ ಇದೀಗ ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಹೇಳಲಿದ್ದಾರೆ. ವಿಜಯ ಕರ್ನಾಟಕ ಮತ್ತು ಮಂಗಳೂರು ನಗರ ಪೊಲೀಸ್‌ ಜಂಟಿಯಾಗಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ಮಂಗಳೂರು ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಶ್ಮಿಕಾ ಭಾಗವಹಿಸಲಿದ್ದು, ಇಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ನಿಂದಾಗುವ ಅಡ್ಡ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.    

short by Pawan / more at Vijayakarnataka

Comments