Skip to main content


ವಿಲ್ಲನ್ ಸಿನಿಮಾಗೆ ಎ ಸರ್ಟಿಪಿಕೇಟ್: ರಕ್ತಪಾತವಿಲ್ಲದಿದ್ದರೆ ಅದನ್ನು ಫೈಟಿಂಗ್ ಎನ್ನುವುದಿಲ್ಲ- ಪ್ರೇಮ್

ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ. ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ಆದರೆ ಇಷ್ಟು ಪ್ರಮಾಣದಲ್ಲಿ ಸಿನಿಮಾ ದೃಶ್ಯಕ್ಕೆ ಕತ್ತರಿ ಹಾಕಿದರೇ ಸಿನಿಮಾ ಮೌಲ್ಯ ಕಡಿಮೆಯಾಗುತ್ತದೆ ಎಂದು ಪ್ರೇಮ್ ಬೇಸರ ವ್ಯಕ್ತ ಪಡಿಸಿದ್ದಾರೆ.    

short by Pawan / more at Kannada Prabha

Comments