Skip to main content


ಕರಾವಳಿ,ಕೊಡಗಿನಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಕರಾವಳಿ ಮತ್ತು ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ. 25 ರಿಂದ ಆ. 28 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಇನ್ನೂ ಪ್ರಬಲವಾಗಿದ್ದು, ಆ. 28 ರ ವರೆಗೂ ಅಲ್ಲಲ್ಲಿ ಭಾರಿ ಮಳೆ ಸುರಿಯಲಿದೆ.  

short by Pawan / more at Kannada News Now

Comments