Skip to main content


ಕೊಡಗು ನೆಪದಲ್ಲಿ ಯಶೋಮಾರ್ಗ ಹೆಸರು ದುರ್ಬಳಕೆ: ಯಶ್ ಎಚ್ಚರಿಕೆ

ಕೊಡಗಿಗೆ ಸಹಾಯ ಮಾಡುವ ನೆಪದಲ್ಲಿ ಯಶೋಮಾರ್ಗ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜಾಹುಲಿ ಗರಂ ಆಗಿದ್ದಾರೆ. 'ಯಶೋಮಾರ್ಗ' ಸಂಸ್ಥೆಯ ಮೂಲಕ ನನ್ನ ಸ್ವಂತ ಸಂಪಾದನೆಯ ಹಣದಲ್ಲಿ ನನ್ನ ಆತ್ಮ ತೃಪ್ತಿಗಾಗಿ ನನ್ನ ಕೈಲಾದ ಮಟ್ಟಿಗೆ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ದೇಣಿಗೆ/ವಂತಿಗೆಯನ್ನು ಜನರಿಂದ ಸ್ವೀಕರಿಸುತ್ತಿಲ್ಲ'' ಎಂದು ಯಶ್ ಮನವರಿಕೆ ಮಾಡಿಕೊಟ್ಟಿದ್ದಾರೆ. ''ಆದರೆ, ಇತ್ತೀಚೆಗೆ ಭಾರಿ ಮಳೆಯಿಂದಾಗಿ ನಿರಾಶ್ರಿತರಾದ ಕೊಡಗಿನ ಜನರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗದ ಹೆಸರಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಇದಕ್ಕಾಗಿ ಯಶೋಮಾರ್ಗದ ಹೆಸರನ್ನು ಬಳಸಬಾರದೆಂದು ವಿನಂತಿಸುತ್ತೇನೆ''. ಎಂದು ಯಶ್ ಅಭಿಮಾನಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದ್ದಾರೆ.     

short by Pawan / more at Filmibeat


Comments