Skip to main content


ಕುದುರೆಮುಖ-ಮಂಗಳೂರು ಸಂಚಾರ ಆರಂಭ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಗುಡ್ಡ ಕುಸಿದ ಪರಿಣಾಮ  ಬೆಳಗ್ಗಿನಿಂದಲೂ ಸಂಚಾರ ಬಂದ್ ಆಗಿದ್ದ ಮಂಗಳೂರು-ಕುದುರೆಮುಖ ನಡುವಿನ ಸಂಚಾರ ಆರಂಭವಾಗಿದ್ದು. ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಳೆ ಆರ್ಭಟಕ್ಕೆ ರಾಜ್ಯ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು, ಹೆದ್ದಾರಿಯಲ್ಲಿ ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಮಣ್ಣು ತೆರವು ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.   


short by Pawan!

Comments