Skip to main content


ವರಮಹಾಲಕ್ಷ್ಮಿ ಹಬ್ಬಕ್ಕೆ ಸೆಟ್ಟೇರಲಿದೆ ಯಶ್ ಹೊಸ ಸಿನಿಮಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹೊಸ ಚಿತ್ರದ ಮುಹೂರ್ತ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದಂದು ನೆಡಯಲಿದೆ. 'ಕೆಜಿಎಫ್' ಸಿನಿಮಾ ನಂತರ ಯಶ್ ಈ ಚಿತ್ರದಲ್ಲಿ ಅಭಿನಯ ಮಾಡುತ್ತಿದ್ದು, ಚಿತ್ರಕ್ಕೆ ಇನ್ನು ಟೈಟಲ್ ಫೈನಲ್ ಆಗಿಲ್ಲ. ಯಶ್ ಅಭಿನಯದ ಹೊಸ ಸಿನಿಮಾಗೆ 'ಕಿರಾತಕ 2' ಎನ್ನುವ ಟೈಟಲ್ ಫಿಕ್ಸ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಅನಿಲ್ ಕುಮಾರ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈ ಹಿಂದೆ 'Rambo 2' ಹಾಗೂ ಕೃಷ್ಣ ರುಕ್ಕು ಚಿತ್ರಕ್ಕೆ ಅನಿಲ್ ಕುಮಾರ್ ಆಕ್ಷನ್ ಕಟ್ ಹೇಳಿದ್ದರು. ವರಮಹಾಲಕ್ಷ್ಮಿ ಹಬ್ಬದಂದು ಮುಹೂರ್ತ ಮಾಡಲಿರುವ ಸಿನಿಮಾ ತಂಡ ಅದೇ ವಾರದಲ್ಲಿ ಚಿತ್ರೀಕರಣವನ್ನು ಶುರು ಮಾಡಲಿದೆ. ಮಂಡ್ಯ, ಮೈಸೂರು ಸುತ್ತಾ ಮುತ್ತ ಚಿತ್ರೀಕರಣ ನಡೆಯಲಿದ್ದು, ಚಿತ್ರತಂಡ ಚಿತ್ರದಲ್ಲಿ ಯಾರೆಲ್ಲಾ ಅಭಿನಯ ಮಾಡಲಿದ್ದಾರೆ ಎನ್ನುವುದನ್ನು ಸದ್ಯಕ್ಕೆ ತಿಳಿಸಿಲ್ಲ.    

short by Pawan / more at Filmibeat

Comments