Skip to main content


ಶಶಿಕುಮಾರ್ ಪುತ್ರನ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್!

ಹೊಸಾ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಲೇ ಬಂದಿರುವವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಡುವಿಲ್ಲದಿದ್ದರೂ ಅತಿಥಿ ಪಾತ್ರಗಳಲ್ಲಿ ನಟಿಸುತ್ತಾ, ಒತ್ತಡಗಳಿದ್ದರೂ ಕಾರ್ಯಕ್ರಮಗಳಿಗೆ ಹೋಗಿ ಬೆನ್ನು ತಟ್ಟುವ ಮನಸ್ಥಿತಿ ಹೊಂದಿರೋ ದರ್ಶನ್ ಇದೀಗ ಶಶಿಕುಮಾರ್ ಪುತ್ರನ ಚಿತ್ರದ ಮುಹೂರ್ತದಲ್ಲಿಯೂ ಪಾಲ್ಗೊಳ್ಳಲಿದ್ದಾರೆ. ಶಶಿಕುಮಾರ್ ಪುತ್ರ ಆದಿತ್ಯ ನಾಯಕನಾಗಿ ಎಂಟ್ರಿ ಕೊಡುತ್ತಿರುವ ವಿಚಾರ ಗೊತ್ತೇ ಇದೆ. ಈ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 2ರ ಭಾನುವಾರ ಅದ್ಧೂರಿಯಾಗಿ ನೆರವೇರಲಿದೆ. ಈ ಸಮಾರಂಭದಲ್ಲಿ ಹಾಜರಿರಲಿರುವ ದರ್ಶನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.  

short by Pawan / more at Public Tv

Comments